117
1 ಸರ್ವಜನಾಂಗಗಳೇ, ಯೆಹೋವನನ್ನು ಕೊಂಡಾಡಿರಿ.
ಸರ್ವಜನರೇ, ಆತನನ್ನು ಸ್ತುತಿಸಿರಿ.
2 ಆತನ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ.
ಆತನ ನಂಬಿಗಸ್ತಿಕೆಯು ಶಾಶ್ವತವಾದದ್ದು.
 
ಯೆಹೋವನಿಗೆ ಸ್ತೋತ್ರವಾಗಲಿ.