3
ದಾವೀದನ ಗಂಡುಮಕ್ಕಳು
ದಾವೀದನ ಕೆಲವು ಗಂಡುಮಕ್ಕಳು ಹೆಬ್ರೋನಿನಲ್ಲಿ ಹುಟ್ಟಿದರು. ದಾವೀದನ ಗಂಡುಮಕ್ಕಳು ಯಾರೆಂದರೆ:
 
ಅಮ್ನೋನನು ದಾವೀದನ ಚೊಚ್ಚಲಮಗನು. ಅವನ ತಾಯಿ ಅಹೀನೋವಮಳು. ಈಕೆಯು ಇಜ್ರೇಲಿನವಳು.
ಎರಡನೆಯ ಮಗನು ಕರ್ಮೇಲ್ಯಳಾದ ಅಬೀಗೈಲಳ ಮಗನಾದ ದಾನಿಯೇಲನು.
ಅಬ್ಷಾಲೋಮನು ದಾವೀದನ ಮೂರನೆಯ ಮಗನು. ಇವನ ತಾಯಿ ಮಾಕಳು. ಈಕೆಯು ಗೆಷೂರಿನ ಅರಸನಾದ ತಲ್ಮೈಯ ಮಗಳು.
ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು.
ಶೆಫಟ್ಯನು ಐದನೆಯ ಮಗನು. ಇವನ ತಾಯಿಯ ಹೆಸರು ಅಬೀಟಲ.
ಆರನೆಯವನು ಇತ್ರಾಮ. ಇವನ ತಾಯಿಯ ಹೆಸರು ಎಗ್ಲ.
 
ಈ ಆರು ಮಂದಿ ಮಕ್ಕಳು ದಾವೀದನಿಗೆ ಹೆಬ್ರೋನಿನಲ್ಲಿ ಹುಟ್ಟಿದರು.
ದಾವೀದನು ಅಲ್ಲಿ ಏಳುವರೆ ವರ್ಷ ಆಳಿದನು. ದಾವೀದನು ಜೆರುಸಲೇಮಿನಲ್ಲಿ ಮೂವತ್ತುಮೂರು ವರ್ಷ ಅರಸನಾಗಿದ್ದನು. ದಾವೀದನಿಗೆ ಜೆರುಸಲೇಮಿನಲ್ಲಿ ಹುಟ್ಟಿದ ಮಕ್ಕಳು ಯಾರೆಂದರೆ:
 
ಬತ್ಷೇಬಳ ನಾಲ್ಕು ಮಂದಿ ಮಕ್ಕಳು: ಶಿಮ್ಮ ಶೋಬಾಬ್, ನಾತಾನ್ ಮತ್ತು ಸೊಲೊಮೋನನು. ಬತ್ಷೇಬಳು ಅಮ್ಮೀಯೇಲನ ಮಗಳು. 6-8 ಇವರಲ್ಲದೆ ಅವನ ಬೇರೆ ಒಂಭತ್ತು ಮಕ್ಕಳು ಯಾರೆಂದರೆ: ಇಬ್ಹಾರ್, ಎಲೀಷಾಮ, ಎಲೀಫೆಲೆಟ್, ನೋಗ, ನೆಫೆಗ್, ಯಾಫೀಯ, ಎಲೀಷಾಮ, ಎಲ್ಯಾದ ಮತ್ತು ಎಲೀಫೆಲೆಟ್. ಇವರೆಲ್ಲಾ ದಾವೀದನ ಮಕ್ಕಳು. ತನ್ನ ಉಪಪತ್ನಿಯರಿಂದ ದಾವೀದನಿಗೆ ಬೇರೆ ಗಂಡುಮಕ್ಕಳೂ ಇದ್ದರು. ತಾಮಾರ್ ಎಂಬಾಕೆಯು ದಾವೀದನ ಮಗಳು.
ದಾವೀದನ ನಂತರ ಯೆಹೂದ ಪ್ರಾಂತ್ಯದ ಅರಸರು
10 ಸೊಲೊಮೋನನ ಮಗನು ರೆಹಬ್ಬಾಮ. ರೆಹಬ್ಬಾಮನ ಮಗನು ಅಬೀಯ. ಅಬೀಯನ ಮಗನು ಆಸ. ಆಸನ ಮಗನು ಯೆಹೋಷಾಫಾಟ್. 11 ಯೆಹೋಷಾಫಾಟನ ಮಗನು ಯೆಹೋರಾಮ್. ಯೆಹೋರಾಮನ ಮಗನು ಅಹಜ್ಯ. ಅಹಜ್ಯನ ಮಗನು ಯೆಹೋವಾಷ. 12 ಯೆಹೋವಾಷನ ಮಗನು ಅಮಚ್ಯ. ಅಮಚ್ಯನ ಮಗನು ಅಜರ್ಯ. ಅಜರ್ಯನ ಮಗನು ಯೋತಾವು. 13 ಯೋತಾವುನ ಮಗನು ಅಹಾಜ. ಅಹಾಜನ ಮಗನು ಹಿಜ್ಕೀಯ. ಹಿಜ್ಕೀಯನ ಮಗನು ಮನಸ್ಸೆ. 14 ಮನಸ್ಸೆಯ ಮಗನು ಅಮೋನ. ಅಮೋನನ ಮಗನು ಯೋಷೀಯ.
15 ಯೋಷೀಯನ ಗಂಡುಮಕ್ಕಳು ಯಾರೆಂದರೆ: ಮೊದಲನೆಯವನು ಯೋಹಾನಾನ್; ಎರಡನೆಯವನು ಯೆಹೋಯಾಕೀಮ; ಮೂರನೆಯವನು ಚಿದ್ಕೀಯ; ನಾಲ್ಕನೆಯವನು ಶಲ್ಲೂಮ್.
16 ಯೆಹೋಯಾಕೀಮನ ಗಂಡುಮಕ್ಕಳು ಯಾರೆಂದರೆ: ಯೆಕೊನ್ಯ ಮತ್ತು ಚಿದ್ಕೀಯ.*
ಬಾಬಿಲೋನ್ ದೇಶಕ್ಕೆ ಸೆರೆಹೋದ ಬಳಿಕ ದಾವೀದನ ವಂಶಾವಳಿ
17 ಯೆಹೋಯಾಕೀಮನು ಬಾಬಿಲೋನಿಗೆ ಸೆರೆಒಯ್ದ ಬಳಿಕ ಅವನಿಗೆ ಹುಟ್ಟಿದ ಗಂಡುಮಕ್ಕಳು: ಶೆಯಲ್ತೀಯೇಲ್,
18 ಮಲ್ಕೀರಾಮ್, ಪೆದಾಯ, ಶೆನಚ್ಚರ್, ಯೆಕಮ್ಯ, ಹೋಷಾಮ ಮತ್ತು ನೆದಬ್ಯ.
19 ಪೆದಾಯನ ಗಂಡುಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಗಂಡುಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತಳು ಅವರ ತಂಗಿ. 20 ಜೆರುಬ್ಬಾಬೆಲನಿಗೆ ಐದು ಮಂದಿ ಬೇರೆ ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ಹೆಸೆದ್.
21 ಹನನ್ಯನ ಮಗನ ಹೆಸರು: ಪೆಲೆಟ್ಯ, ಪೆಲೆಟ್ಯನ ಮಗನು ಯೆಶಾಯ. ಯೆಶಾಯನ ಮಗನು ರೆಫಾಯ. ರೆಫಾಯನ ಮಗನು ಅರ್ನಾನ್, ಅರ್ನಾನನ ಮಗನು ಓಬದ್ಯ. ಓಬದ್ಯನ ಮಗನು ಶೆಕನ್ಯ.
22 ಶೆಕನ್ಯನ ಸಂತತಿಯವರು ಆರು ಮಂದಿ: ಶೆಮಾಯ ಮತ್ತು ಅವನ ಗಂಡುಮಕ್ಕಳು, ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.
23 ನೆಯರ್ಯನಿಗೆ ಮೂರು ಮಂದಿ ಗಂಡುಮಕ್ಕಳು: ಎಲ್ಯೋಗೇನೈ, ಹಿಜ್ಕೀಯ ಮತ್ತು ಅಜ್ರೀಕಾಮ್.
24 ಎಲ್ಯೋಗೇನೈಗೆ ಏಳು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ.
* 3:16 ಯೆಹೋಯಾಕೀಮನ … ಚಿದ್ಕೀಯ ಇದನ್ನು ಎರಡು ರೀತಿಯಲ್ಲಿ ಅರ್ಥಮಾಡಿಕೊಳ್ಳಬಹುದು: “ಈ ಚಿದ್ಕೀಯನು ಯೆಹೋಯಾಕೀಮನ ಮಗನುಮತ್ತು ಯೆಕೊನ್ಯನ ಸಹೋದರನು” ಅಥವಾ “ಈ ಚಿದ್ಕೀಯನು ಯೆಕೊನ್ಯನ ಮಗನು ಮತ್ತು ಯೆಹೋಯಾಕೀಮನ ಮೊಮ್ಮಗನು.”