7
ಗೋಡೆಯನ್ನು ಕಟ್ಟಿ ಮುಗಿಸಿದ ನಂತರ ನಾನು ಬಾಗಿಲುಗಳನ್ನು ಇರಿಸಿದೆನು; ದ್ವಾರಪಾಲಕರನ್ನೂ, ಗಾಯಕರನ್ನೂ, ಲೇವಿಯರನ್ನೂ ನೇಮಿಸಲಾಯಿತು. ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು. ನಾನು ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಾಗಲೇ ಬಾಗಿಲುಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇಮಿನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿರಿ, ಅವರಲ್ಲಿ ಕೆಲವರು ತಮ್ಮ ಕಾವಲಿನ ಸ್ಥಳಗಳಲ್ಲಿಯೂ, ಇನ್ನು ಕೆಲವರನ್ನು ಅವರ ಮನೆಯ ಎದುರಿನಲ್ಲಿಯೂ ಕಾವಲಿರುವಂತೆ ನೇಮಿಸಬೇಕು” ಎಂದು ಆಜ್ಞಾಪಿಸಿದೆನು.
ಸೆರೆವಾಸದಿಂದ ಹಿಂದಿರುಗಿದವರ ಪಟ್ಟಿ
ಪಟ್ಟಣವು ವಿಸ್ತಾರವಾಗಿದ್ದರೂ ಅದರೊಳಗೆ ಬಹಳ ಸ್ವಲ್ಪ ಜನರು ಮಾತ್ರ ಇದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ. ಹೀಗಿರಲಾಗಿ ನಾನು ನನ್ನ ದೇವರ ಪ್ರೇರಣೆಯಿಂದ ಗಣ್ಯರನ್ನು, ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಸಾಧಾರಣ ಜನರನ್ನೂ ಜನಗಣತಿಗಾಗಿ ಸಭೆಸೇರಿಸಿದನು. ಆಗ ಯೆರೂಸಲೇಮಿಗೆ ಮೊದಲು ಬಂದವರ ಹೆಸರುಗಳ ಪಟ್ಟಿಯು ನನಗೆ ಸಿಕ್ಕಿತು. ಅದರಲ್ಲಿ ಬರೆದಿದ್ದೇನೆಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಒಯ್ಯಲ್ಪಟ್ಟವರು ಹಿಂತಿರುಗಿ ತಮ್ಮ ಸ್ವದೇಶವಾದ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ, ಯೆರೂಸಲೇಮಿಗೂ ಹಿಂತಿರುಗಿದರು. ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ. ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ ಎಂಬ ನಾಯಕರೊಡನೆ ತಿರುಗಿ ಬಂದ ಇಸ್ರಾಯೇಲರು ಯಾರೆಂದರೆ:
ಪರೋಷಿನವರು - 2,172.
ಶೆಫಟ್ಯನ ಸಂತಾನದವರು - 372.
10 ಆರಹನ ಸಂತಾನದವರು - 652.
11 ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬನ ಸಂತಾನದವರು - 2,818.
12 ಏಲಾಮಿನ ಸಂತಾನದವರು - 1,254.
13 ಜತ್ತೂವಿನ ಸಂತಾನದವರು - 845.
14 ಜಕ್ಕೈಯನ ಸಂತಾನದವರು - 760.
15 ಬಿನ್ನೂಯನ ಸಂತಾನದವರು - 648.
16 ಬೇಬೈಯನ ಸಂತಾನದವರು - 628.
17 ಅಜ್ಗಾದಿನ ಸಂತಾನದವರು - 2,322.
18 ಅದೋನೀಕಾಮಿನ ಸಂತಾನದವರು - 667.
19 ಬಿಗ್ವೈಯನ ಸಂತಾನದವರು - 2,067.
20 ಆದೀನನ ಸಂತಾನದವರು - 655.
21 ಆಟೇರಿನವರಾದ ಹಿಜ್ಕೀಯನ ಸಂತಾನದವರು - 98.
22 ಹಾಷುಮಿನ ಸಂತಾನದವರು - 328.
23 ಬೇಚೈಯನ ಸಂತಾನದವರು - 324.
24 ಹಾರಿಫಿನ ಸಂತಾನದವರು - 112.
25 ಗಿಬ್ಯೋನಿನ ಸಂತಾನದವರು - 95.
26 ಬೇತ್ಲೆಹೇಮ್ ಮತ್ತು ನೆಟೋಫ ಊರಿನವರು - 188.
27 ಅನಾತೋತ್ ಊರಿನವರು - 128.
28 ಬೇತಜ್ಮಾವೇತಿನ ಊರಿನವರು - 42.
29 ಕಿರ್ಯತ್ಯಾರೀಮ್, ಕೆಫೀರಾ ಮತ್ತು ಬೇರೋತ್ ಊರಿನವರು - 743.
30 ರಾಮಾ ಮತ್ತು ಗೆಬ ಊರಿನವರು - 621.
31 ಮಿಕ್ಮಾಸಿನವರು - 122.
32 ಬೇತೇಲ್ ಮತ್ತು ಆಯಿ ಎಂಬ ಊರಿನವರು - 123.
33 ಎರಡನೆಯ ನೆಬೋವಿನವರು - 52.
34 ಎರಡನೆಯ ಏಲಾಮಿನವರು - 1,254.
35 ಹಾರಿಮನವರು - 320.
36 ಯೆರಿಕೋವಿನವರು - 347.
37 ಲೋದ್, ಹಾದೀದ್, ಮತ್ತು ಓನೋ ಊರಿನವರು - 721.
38 ಸೆನಾಹನವರು - 3,930.
39 ಯಾಜಕರಲ್ಲಿ - ಯೆದಾಯನ ಸಂತಾನದವರಾದ ಯೇಷೂವನ ಮನೆಯವರು - 973.
40 ಇಮ್ಮೇರನ ಸಂತಾನದವರು - 1,052.
41 ಪಷ್ಹೂರನ ಸಂತಾನದವರು - 1,247.
42 ಹಾರಿಮನ ಸಂತಾನದವರು - 1,017
43 ಲೇವಿಯರಲ್ಲಿ - ಹೋದವ್ಯನ ಸಂತಾನದವರಾದ ಯೇಷೂವ, ಕದ್ಮೀಯೇಲ್ ಸಂತಾನದವರು - 74.
44 ಗಾಯಕರಲ್ಲಿ; ಆಸಾಫನ ಸಂತಾನದರು - 148.
45 ದ್ವಾರಪಾಲಕರಲ್ಲಿ; ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು - 138.
46 ದೇವಾಲಯದ ಸೇವಕರಲ್ಲಿ; ಜೀಹ, ಹಸೂಫ, ಟಬ್ಬಾವೋತ್ ಸಂತಾನದರು, 47 ಕೇರೋಸ್, ಸೀಯ, ಪಾದೋನ್ ಸಂತಾನದರು, 48 ಲೆಬಾನ, ಹಗಾಬ, ಸಲ್ಮೈ ಸಂತಾನದರು, 49 ಹಾನಾನ್, ಗಿದ್ದೇಲ್, ಗಹರ್ ಸಂತಾನದರು, 50 ರೆವಾಯ, ರೆಚೀನ್, ನೆಕೋದ ಸಂತಾನದರು, 51 ಗಜ್ಜಾಮ್, ಉಜ್ಜ, ಪಾಸೇಹ ಸಂತಾನದವರು, 52 ಬೇಸೈ, ಮೆಯನೀಮ್, ನೆಫೀಷೆಸೀಮ್ ಸಂತಾನದವರು, 53 ಬಕ್ಬೂಕ್, ಹಕ್ಕೂಫ, ಹರ್ಹೂರ್ ಸಂತಾನದವರು, 54 ಬಚ್ಲೂತ್, ಮೆಹೀದ, ಹರ್ಷ ಸಂತಾನದವರು 55 ಬರ್ಕೋಸ್, ಸೀಸೆರ, ತೆಮಹ ಸಂತಾನದವರು, 56 ನೆಚೀಹ, ಹಟೀಫ ಸಂತಾನದವರು. 57 ಸೊಲೊಮೋನನ ಸೇವಕರಲ್ಲಿ - ಸೋಟೈ, ಸೋಫೆರೆತ್, ಪೆರೀದನ ಸಂತಾನದವರು, 58 ಯಾಲ, ದರ್ಕೋನ್, ಗಿದ್ದೇಲ್ ಸಂತಾನದವರು, 59 ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್, ಆಮೋನ್ ಸಂತಾನದವರು. 60 ಎಲ್ಲಾ ದೇವಾಲಯದ ಸೇವಕರೂ ಸೊಲೊಮೋನನ ಸೇವಕರು ಒಟ್ಟು 392 ಮಂದಿ. 61 ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಆದ್ದೋನ್ ಮತ್ತು ಇಮ್ಮೇರ್, ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರಗಳ ವಂಶಾವಳಿಗಳನ್ನು ತೋರಿಸಿ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಲಾರದವರಾದ, 62 ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು - 642. 63 ಯಾಜಕರಲ್ಲಿ: ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯ ದಾಖಲೆ ತೋರಿಸಲಾರದೆ ಹೋದರು. ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು. 64 ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅವರನ್ನು ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು. 65 *ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ಆಜ್ಞಾಪಿಸಿದನು. 66 ಸರ್ವಸಮೂಹದವರ ಒಟ್ಟು ಸಂಖ್ಯೆಯು ನಲ್ವತ್ತೆರಡು ಸಾವಿರದ ಮುನ್ನೂರ ಅರವತ್ತಾಗಿತ್ತು. 67 ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ಸೇವಕ ಸೇವಕಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಯರೂ ಇನ್ನೂರ ನಲ್ವತ್ತೈದು ಮಂದಿ. 68 ಅವರಿಗೆ ಏಳು ನೂರ ಮೂವತ್ತಾರು ಕುದುರೆಗಳೂ, ಇನ್ನೂರ ನಲ್ವತ್ತೈದು ಹೇಸರಗತ್ತೆಗಳೂ, 69 ನಾನೂರ ಮೂವತ್ತೈದು ಒಂಟೆಗಳೂ ಆರು ಸಾವಿರದ ಏಳುನೂರಿಪ್ಪತ್ತು ಕತ್ತೆಗಳೂ ಇದ್ದವು.
70 ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು. 71 ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು,§ ಒಂದು ಲಕ್ಷದ ಹತ್ತು ಸಾವಿರ ತೊಲಾ ಬೆಳ್ಳಿ; 72 ಉಳಿದ ಜನರು ಕೊಟ್ಟದ್ದು ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು,* ಒಂದು ಲಕ್ಷ ತೊಲಾ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳನ್ನು ನೀಡಿದರು.
73 ಹೀಗೆ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣ ಜನರು ಸೇರಿದವರು, ದೇವಾಲಯದ ಸೇವಕರು ಅಂತೂ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು.
* 7:65 ವಿಮೋ 28:30 ನೋಡಿರಿ. 7:68 ಇನ್ನೂರ ನಲ್ವತ್ತೈದು ಹೇಸರಗತ್ತೆಗಳೂ ಈ ವಾಕ್ಯವು ಇಬ್ರಿಯ ಹಸ್ತಪ್ರತಿಗಳಲ್ಲಿ ಅಥವಾ ಸುರುಳಿಗಳಲ್ಲಿ ಇಲ್ಲ. 7:70 ಸಾವಿರ ಬಂಗಾರದ ನಾಣ್ಯಗಳು, ಅಂದರೆ 8.5 ಕಿಲೋಗ್ರಾಂ ಬಂಗಾರ. § 7:71 ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಅಂದರೆ 170 ಕಿಲೋಗ್ರಾಂ ಬಂಗಾರ. * 7:72 ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಅಂದರೆ 170 ಕಿಲೋಗ್ರಾಂ ಬಂಗಾರ. 7:72 ಒಂದು ಲಕ್ಷ ತೊಲಾ ಬೆಳ್ಳಿ ಅಂದರೆ 1,100 ಕಿಲೋಗ್ರಾಂ ಬೆಳ್ಳಿ.